ಕಾರವಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರ ಪುಣ್ಯ ಸ್ಮರಣೆಯ ಅಂಗವಾಗಿ ರಾಷ್ಟ್ರದಾದ್ಯಂತ ಜ.30 ರಿಂದ ಫೆ.13 ರವರೆಗೆ ನಡೆಯುವ “ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮದ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಜಾಥಾಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಶುಕ್ರವಾರ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾರವಾರ ಸಹಯೋಗದಲ್ಲಿ, ರಾಷ್ಟಿçÃಯ ರ್ಯೋಗ ಅಭಿಯಾನದ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಜನರಲ್ಲಿ ಕುಷ್ಠರೋಗದ ಕುರಿತು ಅರಿವು ಮೂಡಿಸಲು, ಈ ಜಾಥಾ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಂಕರ್ ರಾವ್, ಜಿಲ್ಲಾ ಮಲೇರಿಯಾ ಅಧಿಕಾರಿ ಕ್ಯಾ.ಡಾ.ರಮೇಶ್ ರಾವ್, ಡಾ.ಸುನಿತಾ ಪೆಡ್ನೇಕರ್, ಕ್ರಿಮ್ಸ್ನ ಚರ್ಮ ವಿಭಾಗದ ಮುಖ್ಯಸ್ಥೆ ಹಾಗೂ ತಜ್ಞ ವೈದ್ಯೆ ಡಾ.ಶೃತಿ ಹಾಗೂ ವೈದ್ಯಕೀಯ ಕಾಲೇಜು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ಪರ್ಶ ಕುಷ್ಠರೋಗ ಜಾಗೃತಿ ಜಾಥಾಕ್ಕೆ ಚಾಲನೆ
