ಭಟ್ಕಳ: ಅರಣ್ಯ ಅಧಿಕಾರಿಗಳಿಂದ ದೌರ್ಜನ್ಯಕ್ಕೆ ಒಳಗಾದ ಭಟ್ಕಳ ತಾಲೂಕಿನ ಗಾಂಧಿನಗರದ ಸ್ಥಳಕ್ಕೆ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಕ್ಟೋಬರ್, 1 ಮುಂಜಾನೆ 10:30 ಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಸಂಚಾಲಕ ದೇವರಾಜ ಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಟ್ಕಳ ತಾಲೂಕಿನಲ್ಲಿ ನಿರಂತರ ಅರಣ್ಯ ಸಿಬ್ಬಂದಿಗಳಿಂದ ಅರಣ್ಯವಾಸಿಗಳ ಮೇಲೆ ದೌರ್ಜನ್ಯ, ಕಿರುಕುಳ, ಮಾನಸಿಕ ಹಿಂಸೆ ಜರಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಬಾಹಿರ ಕೃತ್ಯವೆಸಗುವ ಅರಣ್ಯ ಸಿಬ್ಬಂದಿಗಳ ಕುರಿತು ಹೋರಾಟಗಾರರ ವೇದಿಕೆಯು ಗಂಭೀರವಾಗಿ ಪರಿಗಣಿಸಿ ಮುಂದಿನ ಹೋರಾಟದ ರೂಪುರೇಷೆಯನ್ನು ರೂಪಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.