ಕಾರವಾರ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಪ್ರಸ್ತುತ ಖಾಲಿ ಇರುವ 140 ಸ್ವಯಂ ಸೇವಕ ಗೃಹರಕ್ಷಕ/ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಅಭ್ಯರ್ಥಿಗಳು ಫೆ.7 ರಿಂದ ಮಾ.7 ರವರೆಗೆ ಜಿಲ್ಲಾ ಸಮಾದೇಷ್ಟರ ಕಛೇರಿ, ಗೃಹರಕ್ಷಕ ದಳ, ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರ 10ನೇ ತರಗತಿಯ ಅಂಕಪಟ್ಟಿ ಧೃಡೀಕೃತ ಪ್ರತಿ ಮತ್ತು ಆಧಾರ್ ಕಾರ್ಡ ಪ್ರತಿಯನ್ನು ತೋರಿಸಿ ಉಚಿತವಾಗಿ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಅರ್ಜಿ ಭರ್ತಿ ಮಾಡಿ ಪತ್ರಾಂಕಿತ ಅಧಿಕಾರಿಗಳಿಂದ ಧೃಡೀಕರಿಸಲ್ಪಟ್ಟ ಆಧಾರ್ ಕಾರ್ಡ್ ಪ್ರತಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿಯ ನಕಲು ಪ್ರತಿ ಮತ್ತು ತಾಲೂಕಾ ವೈದ್ಯಾಧಿಕಾರಿಗಳಿಂದ ಪಡೆದ ದೈಹಿಕ ಸಧೃಡತೆ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಮಾ. 7 ರೊಳಗಾಗಿ ಸಲ್ಲಿಸಬೇಕು.
ಕೌಶಲ್ಯ ತರಬೇತಿ (ಕಂಪ್ಯೂಟರ್ ಜ್ಞಾನ, ಹೆವಿ ಡ್ರೈವಿಂಗ್ ಲೈಸೆನ್ಸ್, ಅಡುಗೆ ಭಟ್ಟರು, ಮೆಕಾನಿಕ್, ಪೈಂಟರ್ ಮತ್ತು ಪ್ಲಂಬರ್), ಎನ್.ಸಿ.ಸಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಹತೆಗಳು: 10ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಠ 19ರಿಂದ 50 ವರ್ಷದೊಳಗಿರಬೇಕು. ಕನಿಷ್ಠ ಪುರುಷ 163 ಸೆ.ಮೀ, ಮಹಿಳೆ 150 ಸೆ.ಮೀ ಎತ್ತರವಿರಬೇಕು. ಅಭ್ಯರ್ಥಿಯು ಯಾವುದೇ ಅಪರಾಧಿಕ/ರಾಜಕೀಯ ಹಿನ್ನೆಲೆ ಹೊಂದಿರಬಾರದು.
ಸೂಚನೆ: ಗೃಹರಕ್ಷಕ ದಳ ಸಂಸ್ಥೆಯು ಸ್ವಯಂ ಸೇವಕ ಸಂಸ್ಥೆಯಾಗಿದ್ದು, ಇದು ಖಾಯಂ ನೌಕರಿಯಾಗಿರುವುದಿಲ್ಲ ಮತ್ತು ಯಾವುದೇ ರೀತಿಯ ಮಾಸಿಕ ಸಂಬಳ/ ವಿಶೇಷ ಭತ್ಯೆಗಳನ್ನು ಈ ಸಂಸ್ಥೆಯು ನೀಡುವುದಿಲ್ಲ. ಸರ್ಕಾರವು ನಿಗದಿ ಪಡಿಸಿರುವ ಗೌರವ ಧನವನ್ನು ಕರ್ತವ್ಯ ನಿರ್ವಹಿಸುವ ಅವಧಿಗೆ ಮಾತ್ರ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಕಾರವಾರ, ದೂರವಾಣಿ ಸಂಖ್ಯೆ: 08382-200137 ಅಥವಾ 9480898775 ನ್ನು ಸಂಪರ್ಕಿಸುವAತೆ ಗೃಹರಕ್ಷಕ ದಳದ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ