ಕಾರವಾರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ತಾಲೂಕು ಆಸ್ಪತ್ರೆಗಳಲ್ಲಿರುವ ಐ.ಸಿ.ಯು. ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಆಸಕ್ತ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ಕರ್ನಾಟಕ ಮೆಡಿಕಲ್ ಕೌನ್ಸಿಲ್ನಲ್ಲಿ ನೋಂದಣಿ ಹೊಂದಿದ ಅಭ್ಯರ್ಥಿಗಳು ಫೆ.10 ರಿಂದ ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಮೂಲ ದಾಖಲಾತಿಗಳೊಂದಿಗೆ ಕಚೇರಿಯ ಅವಧಿಯಲ್ಲಿ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.