ಕಾರವಾರ: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ( ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಕಾಯ್ದೆ 2013 ರಂತೆ ಯಾವುದೇ ಒಂದು ಕಚೇರಿ/ಸಂಸ್ಥೆ/ಅಥವಾ ಕೆಲಸದ ಸ್ಥಳಗಳಲ್ಲಿ 10 ಅಥವಾ 10 ಕ್ಕಿಂತ ಹೆಚ್ಚು “ಸಿಬ್ಬಂದಿಗಳು” ಕೆಲಸ ಮಾಡುತ್ತಿದ್ದರೆ ಆ ಸಂಸ್ಥೆಯ ಮಾಲೀಕರು/ಮುಖ್ಯಸ್ಥರು ಆ ಕಚೇರಿ/ಸಂಸ್ಥೆ ಅಥವಾ ಕೆಲಸದ ಸ್ಥಳಗಳಲ್ಲಿ ಒಂದು “ಆಂತರಿಕ ದೂರು ಸಮಿತಿ” ಯನ್ನು ರಚನೆ ಮಾಡಬೇಕಾಗಿರುತ್ತದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಸಗಿ/ಸರಕಾರಿ ಕಚೇರಿ/ಕೈಗಾರಿಕಾ/ಸಂಸ್ಥೆ/ಅಂಗಡಿ/ಮಾಲ್ ಹಾಗೂ ಇತರೆ ಸಂಸ್ಥೆಗಳಲ್ಲಿ/ ಕೆಲಸದ ಸ್ಥಳಗಳಲ್ಲಿ 10 ಅಥವಾ 10 ಕ್ಕಿಂತ ಹೆಚ್ಚು “ಸಿಬ್ಬಂದಿಗಳು” ಕೆಲಸ ಮಾಡುತ್ತಿದ್ದರೆ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಕಾಯ್ದೆ 2013 ರಡ್ಡಿ “ಆಂತರಿಕ ದೂರು ಸಮಿತಿ” ಯನ್ನು ರಚಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿಯನ್ನು ನೀಡುವಂತೆ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ರವರಿಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.