ದಾಂಡೇಲಿ : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯವು ಗಬ್ಬು ನಾರುತ್ತಿದ್ದು, ಇದರಿಂದ ಆಕ್ರೋಶಿತಗೊಂಡ ಸ್ಥಳೀಯ ವರ್ತಕರು ಸಾರ್ವಜನಿಕ ಶೌಚಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.
ಕಳೆದ ಎರಡು ತಿಂಗಳಿನಿಂದ ಈ ಸಮಸ್ಯೆ ಎದುರಾಗಿದ್ದು, ಅಸ್ವಚ್ಚತೆಯಿಂದಾಗಿ ಗಬ್ಬು ನಾರುತ್ತಿದೆ. ಅಲ್ಲೇ ಹತ್ತಿರದಲ್ಲಿರುವ ನಗರಸಭೆಯ ಮಳಿಗೆಗಳಲ್ಲಿ ವ್ಯಾಪಾರ ನಡೆಸುತ್ತಿರುವ ವರ್ತಕರಿಗೆ ಇದರಿಂದ ತೀವ್ರ ತೊಂದರೆಯಾಗಿದ್ದು, ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ ಬೀಳತೊಡಗಿದೆ. ಕಳೆದ ಎರಡು ತಿಂಗಳಿನಿಂದ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಈ ಬಗ್ಗೆ ಮನವಿಯನ್ನು ಮಾಡಲಾದರೂ ಯಾವುದೇ ಕ್ರಮವನ್ನು ಕೈಗೊಳ್ಳದ ಹಿನ್ನಲೆಯಲ್ಲಿ ಗುರುವಾರ ಸ್ವಚ್ಛತೆಗಾಗಿ ಆಗ್ರಹಿಸಿ ಬೀಗ ಜಡಿದು ಪ್ರತಿಭಟನೆಯನ್ನು ನಡೆಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ನಿಯಂತ್ರಕರಾದ ಹರಳಯ್ಯ ಲೋಗಾವಿ ಅವರು ಸಂಬಂಧಿಸಿದ ಗುತ್ತಿಗೆದಾರರಿಗೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದ್ದು, ಇಂದು ಸ್ವಚ್ಛತೆಗೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.