ಯಲ್ಲಾಪುರ: ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಗುಳ್ಳಾಪುರದ ಧನ್ಯಾ ಜಿ ಭಟ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಇವಳು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅಶೋಕೆಯ ಸಾರ್ವಭೌಮ ಗುರುಕುಲಮ್ ನಲ್ಲಿ 9 ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ. ಹಿಂದೆ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಪ್ರದರ್ಶನದಲ್ಲಿ ಉತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಳು. ಈಕೆ ಯಲ್ಲಾಪುರ ತಾಲೂಕಿನ ಗುಳ್ಳಾಪುರದ ಜಿ.ಆರ್ ಭಟ್ ಹಾಗೂ ಸಂಧ್ಯಾ ಭಟ್ ಅವರ ಹಿರಿಯ ಪುತ್ರಿಯಾಗಿದ್ದಾಳೆ. ಈಕೆಯ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ, ಊರನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಂಸ್ಕೃತ ಭಾಷಣ: ಧನ್ಯಾ ಭಟ್ ರಾಜ್ಯಮಟ್ಟದಲ್ಲಿ ಪ್ರಥಮ
