ಕಾರವಾರ: ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಹಾಗೂ ಮೀಸಲಾತಿ ಕಲ್ಪಿಸಲು ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯನ್ನು ರಚಿಸಲಾಗಿದ್ದು, ಸದರಿ ಸಲಹಾ ಸಮಿತಿಗೆ ಹಿಂದುಳಿದ ವರ್ಗಕ್ಕೆ ಸೇರಿದ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಬೇಕಾಗಿದ್ದು, ಹಿಂದುಳಿದ ವರ್ಗದ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಹಿಂದುಳಿದ ವರ್ಗಕ್ಕೆ ಸೇರಿದ ಅಲೆಮಾರಿ/ಅರೆಅಲೆಮಾರಿ ಜನಾಂಗದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಫೆ.20 ಸಂಜೆ 5.30 ಗಂಟೆಯೊಳಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆಯ ಮೂಲಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳ ಕಾರ್ಯಲಯಕ್ಕೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಮನಿರ್ದೇಶಿತ ಸದಸ್ಯರ ಆಯ್ಕೆ : ಅರ್ಜಿ ಆಹ್ವಾನ
