ಅಂಕೋಲಾ: ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 63 ರಾಮನಗುಳಿ ಬಳಿ ಯಲ್ಲಾಪುರ ಮಾರ್ಗವಾಗಿ ಸಾಗುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿ ಹಾಗೂ ಅಂಕೋಲಾ ಮಾರ್ಗವಾಗಿ ಸಾಗುತ್ತಿದ್ದ ಪಿ.ವಿ.ಸಿ ಪೈಪ್ ತುಂಬಿದ ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಕಲ್ಲಿದ್ದಲು ತುಂಬಿದ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಪಿ.ವಿ.ಸಿ ಪೈಪ್ ತುಂಬಿದ ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಸಾಗಿಸಲಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಂಕೋಲಾ ಪೋಲಿಸರು ಭೇಟಿ ನೀಡಿದ್ದು ಪರಿಶೀಲಿಸಿದ್ದಾರೆ.
ಲಾರಿಗಳ ನಡುವೆ ಅಪಘಾತ: ಚಾಲಕ ಗಂಭೀರ
