ಜೋಯಿಡಾ : ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಯುವ ಮುಖಂಡ ಹಾಗೂ ತಾಲೂಕಿನ ರಾಮನಗರದ ನಿವಾಸಿ ಅಕ್ಷಯ ರಾವಳ ಅವರು ಆಯ್ಕೆಯಾಗಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಆನ್ಲೈನ್ ಮೂಲಕ ಚುನಾವಣೆ ನಡೆದಿತ್ತು. ಅಧ್ಯಕ್ಷ ಹುದ್ದೆಗೆ ಒಟ್ಟು ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಇವರ ಪೈಕಿ 120 ಮತಗಳನ್ನು ಪಡೆದ ಅಕ್ಷಯ ರಾವಳ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಅಕ್ಷಯ ರಾವಳ ಅವರನ್ನು ತಾಲೂಕಿನ ಗಣ್ಯರನೇಕರು ಅಭಿನಂದಿಸಿದ್ದಾರೆ.