Slide
Slide
Slide
previous arrow
next arrow

‘ಹಾಡು ನಿಲ್ಲಿಸಿದ ಜಾನಪದ ಕೋಗಿಲೆ’

300x250 AD

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನ

ಅಂಕೋಲಾ: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ಅವರು ಫೆ.13 ಗುರುವಾರದಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಜಾನಪದ ಕೋಗಿಲೆ ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ ಅರೋಗ್ಯ ಸುಧಾರಿಸಿ ಮನೆಗೆ ವಾಪಸ್ಸಾಗಿದ್ದರು. ಆದರೆ ಗುರುವಾರ ಮುಂಜಾನೆ ಸುಮಾರು 3.30 ಗಂಟೆಯ ಹೊತ್ತಿಗೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

300x250 AD

ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದ ಸುಕ್ರಿ ಬೊಮ್ಮ ಗೌಡ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದರು. ಜಾನಪದ ಶೈಲಿಯ ಹಾಡುಗಳನ್ನು ಹಾಡುತ್ತಿದ್ದುದರಿಂದ ಅವರು ಜಾನಪದದ ಕೋಗಿಲೆ ಎಂದು‌ ಖ್ಯಾತಿ ಪಡೆದಿದ್ದರು.

ಸುಕ್ರಿ ಬೊಮ್ಮ ಗೌಡ ಅವರಿಗೆ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ನಾಡೋಜ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಇವರಿಗೆ ಲಭಿಸಿವೆ.

Share This
300x250 AD
300x250 AD
300x250 AD
Back to top