ಸಿದ್ದಾಪುರ: ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ವಾರ್ಷಿಕ ಮಹಾರಥೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು.
ಫೆ. 9 ರಿಂದ ರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಮಾಘ ಶುದ್ಧ ಹುಣ್ಣಿಮೆಯ ಬುಧವಾರ ಬೆಳಿಗ್ಗೆ ಆಗಮೋಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಮಹಾರಥೋತ್ಸವ ಸಂಪನ್ನಗೊಂಡಿತು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಭುವನಗಿರಿ ಜಾತ್ರೆ ಸಂಪನ್ನ
![](https://euttarakannada.in/wp-content/uploads/2025/02/IMG-20250212-WA0188-730x438.jpg)