Slide
Slide
Slide
previous arrow
next arrow

ಪ್ರತಿ ಗುರುವಾರ ಶಾಸಕರ ಭೇಟಿಗೆ ಸಿಎಂ ನಿರ್ಧಾರ; ಕ್ಷೇತ್ರದ ಸಮಸ್ಯೆ ಚರ್ಚೆ

300x250 AD

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರವನ್ನು ಸುಗಮವಾಗಿ ಸಾಗುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿ ವಾರವೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ.

ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಗುರುವಾರ ಸಿಎಂ ನಿವಾಸದಲ್ಲಿ ಶಾಸಕರು, ಸಚಿವರನ್ನು ಭೇಟಿ ಮಾಡಿ, ಅವರೊಂದಿಗೆ ಮಾತುಕತೆ ನಡೆಸಲು ಸಿಎಂ ಯೋಜನೆ ಹಾಕಿಕೊಂಡಿದ್ದಾರೆ. ಆ ಮೂಲಕ ಶಾಸಕರ ಕ್ಷೇತ್ರದ ಸಮಸ್ಯೆಗಳನ್ನು ಕುರಿತು ಚರ್ಚೆ ನಡೆಸುವುದು, ಅವರ ಸಮಸ್ಯೆಗಳಿಗೆ ಪರಿಹಾರಗಳ ಬಗ್ಗೆ ಚಿಂತನೆ.ನಡೆಸುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ಬೊಮ್ಮಾಯಿ ಪ್ರಕಟಿಸಿದ್ದಾರೆ.

300x250 AD

ಈ ಹಿಂದೆ ಶಾಸಕರಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು, ಅವರೊಂದಿಗೆ ಮಾತನಾಡುವುದು, ತಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದು ಕೊಂಚ ಕಷ್ಟವಾಗಿತ್ತು. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮತ್ತು ಶಾಸಕರ ಜೊತೆಗೆ ಉತ್ತಮ ಸಂಬಂಧ ನಿರ್ಮಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಪೂರಕವಾಗಿರಲಿದೆ.
ನ್ಯೂಸ್ 13

Share This
300x250 AD
300x250 AD
300x250 AD
Back to top