ಯಲ್ಲಾಪುರ: ತಾಲೂಕಿನ ಶಿರನಾಲ ಶಾಲೆಯ ಶಿಕ್ಷಕಿ ಸಾಹಿತಿ ಆಶಾ ಸತೀಶ ಶೆಟ್ಟಿ ಅವರ ಸೃಜನಶೀಲ ಕಾರ್ಯಚಟುವಟಿಕೆ ಮನ್ನಿಸಿ ರಾಜ್ಯ ಮಟ್ಟದ ಎರಡು ಪ್ರಶಸ್ತಿಗಳು ಲಭಿಸಿವೆ.
ಗ್ರಾಮೀಣ ಪ್ರದೇಶದಲ್ಲಿ ಕೆಲಸವನ್ನು ನಿರ್ವಹಿಸಿ ಸದಾ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಾ ಸಮಾಜದ ಕಟ್ಟ ಕಡೆಯ ಮಗುವಿಗೂ ಕೂಡ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವ
ಅದೇ ರೀತಿ ಸಾಹಿತ್ಯ ಕ್ಷೇತ್ರದಲ್ಲಿಯೂ ಕೂಡ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರಿಗೆ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಹಾಗೂ ರಾಜ್ಯ ಶರಣ ಸಂಕುಲ ರತ್ನ ಪ್ರಶಸ್ತಿನೀಡಿ ಗೌರವಿಸಲಾಗಿದೆ.