ಬನವಾಸಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜಾತಿ- ಮತ ಭೇದವಿಲ್ಲದೆ ಎಲ್ಲರ ಏಳಿಗೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಡಿ.ಜಿ.ಪಟಗಾರ ಹೇಳಿದರು.
ಅವರು ಸಮೀಪದ ಅಜ್ಜರಣಿ ಗ್ರಾಮದ ಸಮುದಾಯ ಭವನದಲ್ಲಿ ಶ್ರೀಗಂಧ ಮಹಿಳಾ ಜ್ಞಾನ ವಿಕಾಸ ಕೇಂದ್ರದಿಂದ ಹಮ್ಮಿಕೊಂಡ ಸರ್ಕಾರದ ಯೋಜನೆಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರವು ಮಹಿಳೆಯರಿಗಾಗಿ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದರು.
ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲ್ಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಜನೆಯ ವಿಚಕ್ಷಣಾಧಿಕಾರಿ ಪದ್ಮ, ಸೇವಾ ಪ್ರತಿನಿಧಿ ಕಾವ್ಯ ಹಾಗೂ ಶ್ರೀಗಂಧ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಇದ್ದರು.