Slide
Slide
Slide
previous arrow
next arrow

ಪಾಂಜೇಲಿಯಲ್ಲಿ ಸಂಪನ್ನಗೊಂಡ ಎಫ್.ಎಲ್.ಎನ್ ಕಲಿಕಾ ಹಬ್ಬ ಕಾರ್ಯಕ್ರಮ

300x250 AD

ಜೋಯಿಡಾ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಶೈಕ್ಷಣಿಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಜೋಯಿಡಾ, ಸಮೂಹ ಸಂಪನ್ಮೂಲ ಕೇಂದ್ರ ನಾಗೋಡಾ, ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ ನಾಗೋಡಾ ಕ್ಲಸ್ಟರ ಮಟ್ಟದ ಎಫ್.ಎಲ್.ಎನ್ ಕಲಿಕಾ ಹಬ್ಬವು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಜೇಲಿಯಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.  

ವೇದಿಕೆ ಮೇಲಿದ್ದ ಗಣ್ಯರಿಂದ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಬಶೀರ್ ಅಹ್ಮದ್ ಶೇಖ್ ಕಾರ್ಯಕ್ರಮದ ಕುರಿತು ಮಾತನಾಡಿ ಎಫ್.ಎಲ್.ಎನ್. ಕಲಿಕಾ ಹಬ್ಬ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ  ಯಶವಂತ ನಾಯ್ಕ ಮಾತನಾಡಿ ಪಾಂಜೇಲಿಯಂತಹ ಕುಗ್ರಾಮದಲ್ಲಿ ಸಹ ನಮ್ಮ ಶಿಕ್ಷಕರು ಇಂತಹ ಕಾರ್ಯಕ್ರಮಗಳನ್ನು ಸಂಘಟಿಸುವುದು ತುಂಬಾ ಸಂತಸದ ಸಂಗತಿ ಎಂದು ಹೇಳಿದರು. ಶಿಕ್ಷಣ ಸಂಯೋಜಕರಾದ ಹರಿಕಾಂತ ಮಾತನಾಡಿ ಎಫ್.ಎಲ್.ಎನ್ ಮಕ್ಕಳಿಗೆ ಇದೊಂದು ಕಲಿಕಾ ಹಬ್ಬ ಎಂದು ಎಫ್.ಎಲ್.ಎನ್ ಮಹತ್ವದ ಕುರಿತು ಮಾಹಿತಿ ನೀಡಿದರು. ಎಫ್.ಎಲ್.ಎನ್ ಕುರಿತು 7 ಚಟುವಟಿಕೆಗಳ ಸ್ಪರ್ಧೆಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಾಯಿತು.ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರಿಂದ ಬಹುಮಾನ ವಿತರಿಸಲಾಯಿತು, ಸ್ಪರ್ಧೆಗಳ ನಿರ್ಣಯಕ್ಕೆ ವಿವಿಧ ಕ್ಲಸ್ಟರಗಳ ಶಿಕ್ಷಕರು ಭಾಗವಹಿಸಿದ್ದರು.                ಕಾರ್ಯಕ್ರಮದಲ್ಲಿ ನಾಗೋಡಾ ಕ್ಲಸ್ಟರ್ ವ್ಯಾಪ್ತಿಯ14 ಶಾಲೆಗಳ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದ್ದರು.  ನಾಗೋಡಾ ಕ್ಲಸ್ಟರನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಸಂಪೂರ್ಣ ಸಹಕಾರ ನೀಡಿದರು.

ಪಾಂಜೇಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಪ್ಪಾಜಿ ದೇಸಾಯಿಯವರು ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ನಾಗೋಡಾ ಗ್ರಾಮ ಪಂಚಾಯತ ಸದಸ್ಯರಾದ ಸಮೀರ್ ತವಡಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಶೀರ್ ಶೇಖ್ ಅಹ್ಮದ್ ಹಾಗೂ ಶಿಕ್ಷಣ ಸಂಯೋಜಕರಾದ ಹರಿಕಾಂತ ಹಾಗೂ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷರಾದ ಯಶವಂತ ನಾಯ್ಕ ಹಾಗೂ ಕಾರ್ಯದರ್ಶಿಗಳಾದ ಮಹಾದೇವ ಹಳದನಕರ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಾದ  ಸಂತೋಷ್ ಸಣದಿ ಮತ್ತು ಊರಿನ ಮಿರಾಶಿಗಳಾದ  ದಿಲೀಪ್ ದೇಸಾಯಿ ಭಾಗವಹಿಸಿದ್ದರು, ಹಾಗೇ ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ ಅಧ್ಯಕ್ಷರು ಉಪಸ್ಥಿತರಿದ್ದರು.

300x250 AD

ನಾಗೋಡಾ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪಾಂಜೇಲಿ ಶಾಲೆಯ ಮುಖ್ಯ ಶಿಕ್ಷಕರಾದ ತನುಜಾ ದೇವಾಡಿಗ ಕಾರ್ಯಕ್ರಮಕ್ಕೆ ಸರ್ವರನ್ನು ಆತ್ಮೀಯವಾಗಿ ಸ್ವಾಗತಿಸಿದರು, ನಾಗೋಡಾ ಕ್ಲಸ್ಟರ ಸಿ.ಆರ್.ಪಿ ಗಳಾದ  ಶಶಿಕಾಂತ ಹೂಲಿ ಯವರು ಎಫ್.ಎಲ್.ಎನ್ ಕಲಿಕಾ ಹಬ್ಬದ ಉದ್ದೇಶ, ಕಾರ್ಯಕ್ರಮದ ಕುರಿತು  ಪ್ರಾಸ್ತಾವಿಕವಾಗಿ ಮಾತನಾಡಿದರು. 

. ಪಾಂಜೇಲಿ ಶಾಲೆಯ ಎಸ್.ಡಿ.ಎಂ.ಸಿ ಸರ್ವ ಪದಾಧಿಕಾರಿಗಳು ಹಾಗೂ ಊರಿನ ಗ್ರಾಮಸ್ಥರು ಹಳೆಯ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಖಾನಗಾಂವ ಶಾಲೆಯ ಶಿಕ್ಷಕರಾದ ಶಾಂತಕುಮಾರ್  ಕೆ.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು, ನಾಗೋಡಾ ಶಾಲೆಯ ಶಿಕ್ಷಕರಾದ  ಪ್ರತಿಮಾ ನಾಯ್ಕ  ವಂದಿಸಿದರು.

Share This
300x250 AD
300x250 AD
300x250 AD
Back to top