ಹಳಿಯಾಳ : ಸ್ವಚ್ಛ ಭಾರತ ಮಿಷನ್, ಸ್ವಚ್ಛತಾ ಹಿ ಸೇವಾ ಘೋಷವಾಕ್ಯದಡಿ ಹಳಿಯಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಹಾಗೂ ವಿಲೇವಾರಿಗಾಗಿ ಪುರಸಭೆಯ 15ನೇ ಹಣಕಾಸು ಯೋಜನೆಯಡಿಯಲ್ಲಿ ಮಂಜೂರಾದ ಹೆಚ್ಚುವರಿ 5 ಕಸ ಸಾಗಿಸುವ ವಾಹನಗಳನ್ನು ಶುಕ್ರವಾರ ಪಟ್ಟಣದ ಪುರಸಭೆಯ ಆವರಣದಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ. ದೇಶಪಾಂಡೆ, ಪಟ್ಟಣದ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡುವ ಮೂಲಕ ಹಳಿಯಾಳ ಪಟ್ಟಣದ ಸೌಂದರ್ಯಕ್ಕೆ ಸಾರ್ವಜನಿಕರು ಕೈಜೋಡಿಸಲು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಮಂಜೂರಾದ ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷೆ ದ್ರೌಪದಿ ಅಗಸರ ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅನಿಲ್ ಚೌವ್ಹಾಣ್, ಪುರಸಭೆಯ ಮಾಜಿ ಅಧ್ಯಕ್ಷರಾದ ಅಜ್ಜಾರ್ ಬಸರಿಕಟ್ಟಿ, ಪುರಸಭೆಯ ಮುಖ್ಯಾಧಿಕಾರಿ ಅಶೋಕ್ ಸಾಳೆನ್ನವರ ಹಾಗೂ ಪುರಸಭೆ ಸದಸ್ಯರು
ಉಪಸ್ಥಿತರಿದ್ದರು.