ಶಿರಸಿ: ಗಾಂಧಿನಗರದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಲ್ಲಿ ಫೆ.15ರಂದು ಶಾಸಕ ಭೀಮಣ್ಣ ನಾಯ್ಕ್ ಪಿಂಚಣಿದಾರರ ದಿನವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ನಂತರ 80 ವರ್ಷ ಮೇಲ್ಪಟ್ಟ ಸಂಘದ 25 ಪಿಂಚಣಿದಾರರಿಗೆ ಶಾಲು ಹೊದಿಸಿ ಸನ್ಮಾನಿಸಿ, 2024-2029 ರ ಅವಧಿಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಪ್ರಮಾಣಪತ್ರ ನೀಡಿ ಪ್ರತಿಜ್ಞಾ ವಿಧಿಯಲ್ಲಿಯೂ ಭಾಗವಹಿಸಿದರು.
ಹಿಂದಿನ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಶಾಸಕರಿಂದ ಗೌರವ ಸಮರ್ಪಣೆ ನಡೆಯಿತು. ಸಂಘದ QR Code ಅನಾವರಣಗೊಳಿಸಿದರು. ನಂತರ ಮಾತನಾಡಿ 80 ವರ್ಷ ಮೇಲ್ಪಟ್ಟ ಸಂಘದ ಪಿಂಚಣಿದಾರರಿಗೆ ಮಾಡಿದ ಸನ್ಮಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘಕ್ಕೆ ಎಲ್ಲ ರೀತಿಯ ಸಹಕಾರ ಮಾಡುವುದಾಗಿ ತಿಳಿಸಿದರು.
ಸಂಘದ ಅಧ್ಯಕ್ಷರಾದ ಬಿ. ಡಿ. ನಾಯ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ರೂಪರೇಷೆಗಳನ್ನು ತಿಳಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಎನ್.ಹೆಗಡೆ ದೊಡ್ಮರಿ ಮಹನಿಯರನ್ನು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಉಪಾಧ್ಯಕ್ಷರಾದ ಜಿ.ಕೆ. ಬೋರಕರವರು ಪದಗ್ರಹಣ ಕಾರ್ಯಕ್ರಮ ನಡೆಸಿದರು. ಸಂಘಟನಾ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ನೆಜ್ಜೂರ ರವರು 80 ವರ್ಷಮೆಲ್ಪಟ್ಟ ಪಿಂಚಣಿದಾರಿಗೆ ಸನ್ಮಾನಿಸಿದರು. ಸಂಘದ ಉಪಾಧ್ಯಕ್ಷರಾದ ಕುಮಾರ ಕುರ್ಸೆರವರು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಿರಸಿ ತಾಲೂಕಿನ ಪಿಂಚಣಿದಾರರು ಉಪಸ್ಥಿತರಿದ್ದರು.