Slide
Slide
Slide
previous arrow
next arrow

ಸಿ.ಆರ್.ಪಿ ವಿಶಾಲಾಕ್ಷಿ ನಾಯ್ಕ ಮಡಿಲಿಗೆ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿಯ ಗೌರವ

300x250 AD

ಜೋಯಿಡಾ : ಶೈಕ್ಷಣಿಕ ಇಲಾಖೆಯಲ್ಲಿ ಅನುಪಮ ಸೇವೆ ಸಲ್ಲಿರುವುದನ್ನು ಗುರುತಿಸಿ ಬೆಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ಹಾಗೂ ಅರೆಸರಕರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ತಾಲೂಕಿನ ಪ್ರಧಾನಿ ವಿಭಾಗದಲ್ಲಿ‌ ಸಿಆರ್‌ಪಿಯಾಗಿ ಸೇವೆ ಸಲ್ಲಿಸುತ್ತಿರುವ ವಿಶಾಲಾಕ್ಷಿ ಮೋಹನ ನಾಯ್ಕ ಅವರಿಗೆ ರಾಜ್ಯ ಮಟ್ಟದ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿಯನ್ನು‌ ನೀಡಿ ಗೌರವಿಸಿದೆ.

ಕ್ರಿಯಾಶೀಲ ಶಿಕ್ಷಕಿಯಾಗಿ, ಸಂಘಟಕಿಯಾಗಿ, ಶೈಕ್ಷಣಿಕ‌ ಚಿಂತಕಿಯಾಗಿ ಹಾಗೂ ಸಿಆರ್‌ಪಿಯಾಗಿ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಅದರಲ್ಲೂ ಮುಖ್ಯವಾಗಿ ಗ್ರಾಮೀಣ‌ ಭಾಗದ ಶೈಕ್ಷಣಿಕ ಚಟುವಟಿಕೆಗೆ ವಿಶೇಷ ಉತ್ತೇಜನ ಕೊಡುತ್ತಾ ಬಂದಿರುವ ವಿಶಾಲಾಕ್ಷಿ ಮೋಹನ ನಾಯ್ಕ ಅವರ ಪ್ರಾಮಾಣಿಕ ಸೇವೆ ಮತ್ತು ಕರ್ತವ್ಯ ಬದ್ಧತೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಗೂ ಅರೆಸರಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ರಾಜ್ಯ ಮಟ್ಟದ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿಯನ್ನು‌ ನೀಡಿ ಗೌರವಿಸಿದೆ.

ಧಾರವಾಡದ  ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾಯ ಸಭಾಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಹಾಗೂ ಅರೆಸರಕರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಡಾ.ವಿಶ್ವನಾಥ ಅಧ್ಯಕ್ಷತೆಯಲ್ಲಿ, ಸಂಘದ ರಾಜ್ಯ ಕಾರ್ಯದರ್ಶಿ ಎನ್.ಎಲ್.ರಾಠೋಡ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಹರಿಕಾರ ಅವರ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ವಿಶಾಲಾಕ್ಷಿ ಮೋಹನ ನಾಯ್ಕ ಅವರಿಗೆ ರಾಜ್ಯ ಮಟ್ಟದ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

300x250 AD

ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆದ ವಿಶಾಲಾಕ್ಷಿ ಮೋಹನ ನಾಯ್ಕ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಶೇಖ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧೀಕ್ಷಕರಾದ ಸಂತೋಷ ಸಾಳುಂಕೆ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಯಶವಂತ ನಾಯ್ಕ ಹಾಗೂ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಶಿಕ್ಷಕರು, ತಾಲೂಕಿನ ಸಿ.ಆರ್.ಪಿಗಳು, ಪ್ರಧಾನಿ ವಿಭಾಗದ ಎಲ್ಲ ಶಾಲೆಗಳ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಬಿಸಿಯೂಟದ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಜ್ಯಮಟ್ಟದ ಈ ಪ್ರಶಸ್ತಿಯನ್ನು ಪಡೆದ ವಿಶಾಲಾಕ್ಷಿ ಮೋಹನ ನಾಯ್ಕ ಅವರು ಈ ಸಾಧನೆಗೆ ಇಲಾಖೆಯ ಮೇಲಾಧಿಕಾರಿಗಳ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಶಿಕ್ಷಕರ ಸಂಘದ ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರ ತುಂಬು ಹೃದಯದ ಸಹಕಾರದಿಂದ ಅತ್ಯುತ್ತಮವಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು. ವಿವಿಧ ಶಾಲೆಗಳ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ನಮ್ಮ ಕಾರ್ಯ ಚಟುವಟಿಕೆಗಳಿಗೆ ವಿಶೇಷ ಸಹಕಾರವನ್ನು ನೀಡಿದ ಪರಿಣಾಮವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು ಎಂದು ವಿಶಾಲಾಕ್ಷಿ ಮೋಹನ‌ ನಾಯ್ಕ ಅವರು ತಮ್ಮ ಹರ್ಷವನ್ನು ವ್ಯಕ್ತಪಡಿಸಿ, ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.

Share This
300x250 AD
300x250 AD
300x250 AD
Back to top