ದಾಂಡೇಲಿ : ನಗರದ ಬಸವೇಶ್ವರ ನಗರದಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಇಂದಿನಿಂದ ಫೆ.20 ರವರೆಗೆ 19ನೇ ವರ್ಷದ ವಾರ್ಷಿಕ ವರ್ಧಂತಿ ಉತ್ಸವ ನಡೆಯಲಿದ್ದು, ಮಂಗಳವಾರ ವಾರ್ಷಿಕ ವರ್ಧಂತಿ ಉತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.
ಮಂಗಳವಾರ ಸಂಜೆ ಶ್ರೀ ಸ್ವಾಮಿ ಸನ್ನಿಧಿಯಿಂದ ಶ್ರೀ ಶಿರಡಿ ಸಾಯಿಬಾಬಾರವರ ಭವ್ಯ ಶೋಭಾಯಾತ್ರೆಯು ಆರಂಭಗೊಂಡು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿತು.
ಶೋಭಾಯಾತ್ರೆಯಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಸ್ಥಳೀಯ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಫೆ.19 ರ ಇಂದು ವಿಶೇಷ ಪೂಜಾಗಳೊಂದಿಗೆ, ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಶ್ರೀ ಶಿರಡಿ ಸಾಯಿಬಾಬಾರವರ ಮಹಾಮಂಗಳಾರತಿ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದೆ.