ದಾಂಡೇಲಿ : ನಗರದ ಶಿವ ಜಯಂತಿ ಉತ್ಸವ ಸಮಿತಿಯ ಆಶ್ರಯದಡಿ ಬುಧವಾರ ಆಯೋಜಿಸಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಭವ್ಯ ಶೋಭಾಯಾತ್ರೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಎಲ್ಲರ ಗಮನ ಸೆಳೆಯಿತು.
ಬುಧವಾರ ಸಂಜೆ ಗಾಂಧಿನಗರದಿಂದ ಆರಂಭಗೊಂಡ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಭವ್ಯ ಶೋಭಾ ಯಾತ್ರೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ ಸೋಮಾನಿ ವೃತ್ತದ ಹತ್ತಿರವಿರುವ ಶ್ರೀಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಆವರಣದಲ್ಲಿ ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶಿವ ಜಯಂತಿ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮಿಸಿದ್ದರು.