ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66 ಹತ್ತಿರದಲ್ಲಿರುವ ಹಿರೇಮಠ ಸ್ಮಶಾನದಿಂದ ಕಾಸರಕೋಡ ಗ್ರಾಮದಲ್ಲಿ ಸಮುದ್ರಗುಂಟ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಬಂದರು ಅಭಿವೃದ್ಧಿ ಯೋಜನಾ ಸ್ಥಳದವರೆಗೆ ಹೋಗುವ ರಸ್ತೆ ಕಾಮಗಾರಿಯ ಸರ್ವೆ ಕಾರ್ಯ ನಡೆಯುವ ಸುತ್ತಲಿನ ಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ಫೆಬ್ರವರಿ 25 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಆದೇಶಿಸಿದ್ದಾರೆ.
ನಿಬಂಧನೆಗಳು: ಈ ಅವಧಿಯಲ್ಲಿ, ಗರಿಷ್ಟ/ಕನಿಷ್ಠ 5 ಹಾಗೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಧರಣಿ ಹಾಗೂ ಪ್ರತಿಭಟನೆ ಉದ್ದೇಶಕ್ಕೆ ಸೇರುವುದನ್ನು ಹಾಗೂ ಸಾರ್ವಜನಕರಿಗೆ ತೊಂದರೆಯುಂಟಾಗುವಂತೆ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳು/ಗುಂಪುಗಳು ಆಯುಧ, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಕುಡುಗೋಲುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.