ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸುವ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಫೆ.28 ರಂದು ಬೆಳಗ್ಗೆ 11 ಗಂಟೆಗೆ ಕಾರವಾರದ ಕ್ರಿಮ್ಸ್ ಆವರಣದಲ್ಲಿ ನಡೆಯಲಿದೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲಿದ್ದು, ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ವೈದ್ಯಕೀಯ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃಧ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ,ಆಡಳಿತ ಸುಧಾರಣಾ ಆಯೋಗದ ಅದ್ಯಕ್ಷ ಆರ್.ವಿ. ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್.ವಿ.ಸಂಕನೂರ, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ ಉಳ್ವೇಕರ, ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.