ಜೋಯಿಡಾ : ತಾಲ್ಲೂಕಿನ ಕುಂಬಾರವಾಡದ ಡೊಣಪ ಸಮೀಪದಲ್ಲಿ ಬೊಲೆರೋ ಕ್ಯಾಂಪರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಉಳಿದ ಹತ್ತು ಜನರಿಗೆ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ 1.30 ಗಂಟೆ ಸುಮಾರಿಗೆ ನಡೆದಿದೆ.
ಗಾಯಗೊಂಡವರನ್ನು ತಕ್ಷಣವೇ ಜೋಯಿಡಾದ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಗೊಂಡ ಹತ್ತು ಜನರ ಪೈಕಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ತಿಳಿದುಬಂದಿದೆ ಸ್ಥಳಕ್ಕೆ ಜೋಯಿಡಾದ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಮೃತನ ಹಾಗೂ ಗಾಯಗೊಂಡವರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.