ಕಾರವಾರ: ಜಿಲ್ಲೆಯಲ್ಲಿ ಬಾಕಿ ಉಳಿದ ದಾಂಡೇಲಿ ತಾಲೂಕಿನ ಆಲೂರು, ಕಾರವಾರ ತಾಲೂಕಿನ ಮಾಜಾಳಿ, ಕುಮಟಾ ತಾಲೂಕಿನ ಕಲ್ಲಬ್ಬೆ, ಮುಂಡಗೋಡ ತಾಲೂಕಿನ ಮೈನಳ್ಳಿ, ಶಿರಸಿ ತಾಲೂಕಿನ ಇಸಳೂರು, ಸೂಪಾ ತಾಲೂಕಿನ ಗಂಗೋಡ, ನಂದಿಗದ್ದೆ, ಅಣಶಿ, ಬಜಾರ್‌ಕುಣಂಗ, ನಾಗೋಡ, ಉಳವಿ ಸೇರಿದಂತೆ ಒಟ್ಟು 11 ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಗ್ರಾಮ ಒನ್ ಕೇಂದ್ರ ಅನುಷ್ಠಾನಗೊಳ್ಳುವುದು ಅವಶ್ಯಕತೆ ಇರುವುದರಿಂದ ಆಯ್ದ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಉದ್ದೇಶಿಸಿದ್ದು, ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‌ಸೈಟ್: https://www.karnatakaone.gov.in/Public/GramOneFranchiseeTerms ಮೂಲಕ ಮಾ.15 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತಹಶೀಲ್ದಾರ ಕಚೇರಿಗೆ ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಹಾಗೂ ಗ್ರಾಮ ಒನ್ ಯೋಜನೆಯ ಸದಸ್ಯ ಕಾರ್ಯದರ್ಶಿ ಸಾಜಿದ್‌ಅಹಮದ್ ಮುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.