ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ರ ದಾಖಲೆಯ ಬಜೆಟ್ ಮಂಡಿಸಿದ್ದಾರೆ.
ಈ ಬಾರಿ ಕೃಷಿಗೆ ಹೆಚ್ಚಿನ ಮಹತ್ವ ನೀಡಿದ್ದು, ಈ ಕೆಳಗಿನಂತಿವೆ.
* 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು.
* ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.
* ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ್ ಬೆಳೆಯನ್ನಾಗಿ ಬೆಳೆಯಲು ಪ್ರೋತ್ಸಾಹ
* ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಒದಗಿಸಲಾಗುವುದು.
* ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮ
ಕೃಷಿ ಭಾಗ್ಯ ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ 12,000, ಕೃಷಿ ಹೊಂಡಗಳ ನಿರ್ಮಾಣ
* ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಕೆ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪನೆ. ಈ ಕೇಂದ್ರವು ರೈತರಿಗೆ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
* ರಾಜ್ಯದಲ್ಲಿ ಇತ್ತೀಚಿನ ವರ್ಷಗಳ ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
* ಕರ್ನಾಟಕ ರಾಜ್ಯದ ಸಾಗುವಳಿ ಪ್ರದೇಶದ ಶೇ.64ರಷ್ಟು ಪ್ರದೇಶವು ಮಳೆಯಾಶ್ರಿತ, ಹೀಗಾಗಿ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼ ಅನುಷ್ಠಾನ.
* ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಗುರಿ.
* ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ
ರೈತರಿಗೆ ಮಣ್ಣು ಪರೀಕ್ಷೆ ಹಾಗೂ ರಸಗೊಬ್ಬರ, ಬಿತ್ತನೆ ಬೀಜ, ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟ ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ.
* ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಮಂಡ್ಯ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆ ಯೋಜನೆ ಜಾರಿ.
* ಜೈವಿಕ ಕೃಷಿ ಪರಿಕರ ಸ್ಟಾರ್ಟ್-ಅಪ್‌ಗಳು ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜನ.
* ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಕ್ರಮ.
* ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪನೆಗೆ ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಹಾಗೂ ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲು ಕ್ರಮ.
ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲು 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್ʼ ಸ್ಥಾಪನೆ
* ವಿಜಯಪುರದ ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ