ಶಿಂದೋಳಿ ಶಾಲೆಯಲ್ಲಿ ರಾಷ್ಟೀಯ ವಿಜ್ಞಾನ ದಿನ ಆಚರಣೆ
ಜೋಯಿಡಾ: ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯಲ್ಲಿ ರಾಷ್ಟೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನಾ ಸಮಯದಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನದ ಕಾರ್ಯಕ್ರಮವನ್ನು ಉಪಾಧ್ಯಕ್ಷೆ ಶ್ರೀಮತಿ ತನುಜಾ ಮಸೂರಕರ,ಸದಸ್ಯೆ ಶ್ರೀಮತಿ ನಂದಿನಿ ಕಾಪೋಲಕರ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಶಿಕ್ಷಕರಾದ ಅನಿಲ ರಾಠೋಡ ಮಾತನಾಡಿ ವೈಜ್ಞಾನಿಕ ಯುಗದಲ್ಲಿ ಮಕ್ಕಳಲ್ಲಿ ವೈಜ್ಞಾನಿಕ ಅಭಿರುಚಿಯನ್ನು ಬೆಳೆಸುವುದು ಬಹುಮುಖ್ಯ,ವಿಜ್ಞಾನದ ಮಾದರಿಗಳ ಪ್ರದರ್ಶನಗಳ ತಯಾರಿಕೆಗೆ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ ಶಾಲೆಯ ವಿಜ್ಞಾನ ಶಿಕ್ಷಕರಾದ ಆನಂದ ಪಿ.ಅವರ ಕಾರ್ಯವನ್ನು ಶ್ಲಾಘಿಸಿದರು. ಶಾಲೆಯ ವಿಜ್ಞಾನ ಶಿಕ್ಷಕರಾದ ಆನಂದ ಪಿ. ವಿದ್ಯಾರ್ಥಿಗಳಿಗೆ ಸರ್ ಸಿ.ವಿ. ರಾಮನ್ ರವರ ರಾಮನ್ ಎಫೆಕ್ಟ್ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು ಹಾಗೂ ಇದೇ ಸಂದರ್ಭದಲ್ಲಿ ಪವಾಡ ಬಯಲು ಕಾರ್ಯಕ್ರಮವನ್ನು ವಿಜ್ಞಾನ ಶಿಕ್ಷಕರು ತೋರಿಸಿದರು.ವಿಜ್ಞಾನದ ಮೂಲಕ ಪವಾಡ ಬಯಲನ್ನು ನಡೆಸಿ ಜನರು ಮೂಢನಂಬಿಕೆಯಿಂದ ಹೇಗೆ ಮೋಸ ಹೋಗುತ್ತಾರೆ ಎಂಬುದನ್ನು ತೋರಿಸಿದರು. ಗುರುತ್ವ ಬಲ,ಚಲನೆಯ ವಿಧಗಳು,ಬೆಳಕಿನ ಪ್ರತಿಫಲನ, ಕೆಲಿಡೋ ಸ್ಕೋಪ,ಕಣ್ಣಿನ ಮಾದರಿ,ವಿದ್ಯುತ್ ಮಂಡಲಗಳು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ವಿಜ್ಞಾನ ಮಾದರಿಗಳನ್ನು ಪ್ರದರ್ಶನ ಮಾಡಿ ಸಂಬಂಧಿಸಿದ ಮಾದರಿಗಳ ವಿವರಣೆಯನ್ನು ನೀಡಿದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ವಿಜ್ಞಾನ ಮಾದರಿಗಳ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಶಾಲಾ ಶಿಕ್ಷಕರು,ಶಿಕ್ಷಕಿಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.ಸಹ ಶಿಕ್ಷಕಿಯಾದ ಶ್ರೀಮತಿ ವಿದ್ಯಾ ಮೇಡಮ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.