ಭಟ್ಕಳ: ಕೇಂದ್ರ ಸರ್ಕಾರದ ಯುವ ಕಾರ್ಯ ಸಚಿವಾಲಯದ ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಆಯ್ಕೆ ಮಾಡಿ ಕಾರವಾರದ ಯುವ ಕೇಂದ್ರದ ಯಶವಂತ್ ಯಾದವ್ ಇಂದು ಆದೇಶ ಹೊರಡಿಸಿದ್ದಾರೆ.
ಮೂಲತಃ ಹೊನ್ನಾವರ ತಾಲೂಕಿನ ಮಾವಿನಕುರ್ವಾ ಗ್ರಾಮದ ನಿವಾಸಿಯಾಗಿದ್ದಾರೆ. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಇವರು ಹೊನ್ನಾವರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಾವಿನಕುರ್ವಾ ಸೇತುವೆ ಹೋರಾಟ ಸಮಿತಿಯ ಮೂಂಚೂಣಿ ನಾಯಕರಲ್ಲಿ ಓರ್ವರಾಗಿ ಸೇತುವೆ ಮಂಜೂರಾತಿ ಮಾಡಿಸುವಲ್ಲಿ ಇವರ ಅವಿರತ ಶ್ರಮ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ಒದಗಿಸುವುದು, ತಾಲೂಕಿನ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲು ಸರ್ಕಾರ ಮಟ್ಟದಲ್ಲಿ ಪ್ರಯತ್ನಿಸುವುದು, ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಪಾಲ್ಗೊಂಡು ಅಭಿವೃದ್ಧಿಪರ ಚಿಂತಕರಾಗಿ, ಗುರುತಿಸಿಕೊಂಡು ಜನಮೆಚ್ಚುಗೆ ಪಾತ್ರರಾಗಿದ್ದಾರೆ.