ದಾಂಡೇಲಿ : ನಗರದ ಸಮೀಪದ ಮೌಳಂಗಿ ಹತ್ತಿರದ ಕೊಣಪದಲ್ಲಿರುವ ಏಳು ಮಕ್ಕಳ ತಾಯಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವೂ ಮಂಗಳವಾರ ಸಂಭ್ರಮ, ಸಡಗರದಿಂದ ಜರುಗಿತು.
ಮಂಗಳವಾರ ಬೆಳಗಿನಿಂದಲೆ ವಿವಿಧ ಪೂಜಾರಾಧನೆಗಳು ಜರುಗಿತು. ಮಧ್ಯಾಹ್ನ ಮಹಾಪೂಜೆಯಾದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ಅನ್ನ ಸಂತರ್ಪಣೆಯ ಬಳಿಕ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಜಾತ್ರೋತ್ಸವದ ಯಶಸ್ಸಿಗೆ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.