Slide
Slide
Slide
previous arrow
next arrow

ಮದ್ಯ ಸಾಗಾಟ, ಮಾರಾಟ ನಿಷೇಧ

300x250 AD

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಮದಹನ ಮತ್ತು ಹೋಳಿ ಹಬ್ಬ, ರಂಗಪಂಚಮಿ ದಿವಸಗಳಂದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಜಿಲ್ಲೆಯ ವಿವಿಧ ತಾಲೂಕು/ಪೋಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬಾರ್/ವೈನ್ ಶಾಪ್ ಗಳನ್ನು ಮತ್ತು ಎಲ್ಲಾ ರೀತಿಯ ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.

ಶಿರಸಿ ಶಹರ ಮತ್ತು ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12 ರಂದು ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 15 ರ ಬೆಳಗ್ಗೆ 6 ಗಂಟೆಯವರೆಗೆ, ದಾಂಡೇಲಿ, ಹಳಿಯಾಳ, ಜೋಯಿಡಾ ಕಾರವಾರ ಅಂಕೋಲಾ ಭಟ್ಕಳ, ಹೊನ್ನಾವರ, ಸಿದ್ದಾಪುರ ತಾಲೂಕಿನಾದ್ಯಂತ ಮತ್ತು ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 13 ರಂದು ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 15 ರ ಬೆಳಗ್ಗೆ 6 ಗಂಟೆಯವರೆಗೆ, ಯಲ್ಲಾಪುರ ತಾಲೂಕಿನಾದ್ಯಂತ ಮಾರ್ಚ್ 14 ರಂದು ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 16 ರ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ಮುಂಡಗೋಡ ತಾಲೂಕಿನಾದ್ಯಂತ ಮಾರ್ಚ್ 19 ರಂದು ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 20 ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top