ಕುಮಟಾ: ಕತಗಾಲಿನ ಕೆನರಾ ವೆಲ್‌ಫೆರ್ ಟ್ರಸ್ಟಿನ ಸೌ.ಕಮಲಾಬಾಯಿ ಪಿಕಳೆ ಹೈಸ್ಕೂಲ್’ಗೆ ಕ್ಯಾಂಪ್ಕೋ ಸಂಸ್ಥೆ ಶಿರಸಿಯ ಇದರ ನಿರ್ದೇಶಕರಾದ ಶಂಭುಲಿಂಗ ಹೆಗಡೆಯವರು ಭೇಟಿ ನೀಡಿ ರೂ.50,000 ಗಳನ್ನು ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ ದೇಣಿಗೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಯಾಂಪ್ಕೋ ಸಂಸ್ಥೆಯು ನಡೆದು ಬಂದ ದಾರಿ ಹಾಗೂ ಸಂಸ್ಥೆಯ ಸಮಾಜಮುಖಿ ಕೆಲಸ ಕಾರ್ಯಗಳ ಬಗ್ಗೆ ವಿವರಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಿವೇಕ ಎಂ ಜಾಲಿಸತ್ಗಿ ಮಾತನಾಡಿ, ಶಾಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕಛೇರಿಯ ವ್ಯವಸ್ಥಾಪಕರಾದ ಭರತ್ ಭಟ್ಟ್ ಹಾಗೂ ಕುಮಟಾ ಶಾಖೆಯ ವ್ಯವಸ್ಥಾಪಕರು ಮತ್ತು ಶಾಲೆಯ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದರು.