ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ರವಿವಾರ ತಾಲೂಕಿನ ಅವರಗುಪ್ಪಾದಲ್ಲಿ 50 ಲಕ್ಷ ರೂ.ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಕೋಲಶಿರ್ಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅವರಗುಪ್ಪಾ ಎಸ್.ಸಿ. ಕೇರಿಯ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಜಾತ್ರೆ ಇರುವುದರಿಂದ ತಕ್ಷಣ ಕೆಲಸ ಪ್ರಾರಂಭಿಸಿ ಕಾಲಮಿತಿಯೊಳಗೆ ಗುಣಮಟ್ಟದ ರಸ್ತೆ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದಿದ್ದ ಈ ರಸ್ತೆಯ ಕಾಮಗಾರಿಗೆ ಅನುದಾನ ನೀಡಿದ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಮಾರಿಕಾಂಬಾ ಜಾತ್ರಾ ಉತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.