ದಾಂಡೇಲಿ : ಚಲನಚಿತ್ರ ನಟ ದಿ: ಪುನೀತ್ ರಾಜಕುಮಾರ್ ಅವರ 50ನೇ ಜನ್ಮ ದಿನಾಚರಣೆಯನ್ನು ನಗರದ ವಿವಿದೆಡೆ ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು.
ನಗರದ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದಿಂದ ಕೆ.ಸಿ ವೃತ್ತದ ಹತ್ತಿರ ಪುನೀತ್ ರಾಜಕುಮಾರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆಯ ನಿಮಿತ್ತ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ನಗರದ ಲೆನಿನ್ ರಸ್ತೆಯಲ್ಲಿರುವ ದಾಂಡೇಲಪ್ಪಾ ವಾಹನ ಮಾಲಕರ – ಚಾಲಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಪುನೀತ್ ರಾಜಕುಮಾರ್ ಅವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ದಾಂಡೇಲಿಯ ಗೆಳೆಯರ ಬಳಗದ ವತಿಯಿಂದ ಬಾಂಬುಗೇಟ್ ಹತ್ತಿರ ಚಲನಚಿತ್ರ ನಟ ದಿ.ಪುನೀತ್ ರಾಜಕುಮಾರ್ ಅವರ 50ನೇ ವರ್ಷದ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆಯ ನಿಮಿತ್ತ ಶಾಲಾ ವಿದ್ಯಾರ್ಥಿಗಳಿಗೆ ಪೆನ್ನು ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.