ಸುರಕ್ಷಿತವಾಗಿ ಭುವಿಗೆ ಮರಳಿದ ‘ಸುನಿತಾ ವಿಲಿಯಮ್ಸ್’
ಫ್ಲೋರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಒಂಬತ್ತು ತಿಂಗಳುಗಳ ಕಾಲ ಕಳೆದಿರುವ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಪುನಃ ಭೂಮಿಗೆ ಸುರಕ್ಷಿತವಾಗಿ ಬಂದು ತಲುಪಿದ್ದಾರೆ. 2024, ಜೂನ್ 5 ರಂದು ಬೋಯಿಂಗ್ ಸ್ಟಾರ್‌ಲೈನರ್‌ನಲ್ಲಿ ಬಾಹ್ಯಾಕಾಶಕ್ಕೆ ಹಾರಿದ ಅವರು ಬುಧವಾರ ಬೆಳಿಗಿನ ಜಾವ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಮೂಲಕ ಭೂಮಿಗೆ ಬಂದಿಳಿದರು.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ 17 ಗಂಟೆಗಳ ಕಾಲ ಪ್ರಯಾಣಿಸಿದ ಐಎಸ್‌ಎಸ್ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಬಳಿಕ ಡ್ರ್ಯಾಗನ್ ಕ್ಯಾಪ್ಸೂಲ್‌ನಿಂದ, ಗಗನಯಾತ್ರಿಗಳು ವಿವಿಧ ಸಾಧನಗಳ ಮೂಲಕ ಬಂದಿದ್ದಾರೆ.
ಸುನೀತಾ ವಿಲಿಯಮ್ಸ್ ಕ್ಯಾಪ್ಸುಲ್‌ನಿಂದ ಹೊರಬರುವಾಗ ಕೈ ಬೀಸುತ್ತಾ ವಿಜಯ ಚಿಹ್ನೆಗಳನ್ನು ಮಾಡಿ ಹರ್ಷ ವ್ಯಕ್ತಪಡಿಸಿದರು.