ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಏಪ್ರಿಲ್ ತಿಂಗಳಿನಲ್ಲಿ ಜೆ.ಸಿ.ಬಿ. ಚಾಲನೆ ಹಾಗೂ ಮೇ ತಿಂಗಳಿನಲ್ಲಿ ಲಘು ಮೋಟಾರ ವಾಹನ ಚಾಲನೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮಾ.28 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶಿಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶ್ವಸಿ ಉದ್ಯಮಿಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿAದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ವೆಬ್‌ಸೈಟ್: http://www.rsetihaliyal.org ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8217236973, 9483485489, 9482188780 ನ್ನು ಸಂಪರ್ಕಿಸುವಂತೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೆ.ಸಿ.ಬಿ, ಲಘು ಮೋಟಾರ ವಾಹನ ಚಾಲನೆ ತರಬೇತಿ
