ಬನವಾಸಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಮೀಪದ ಅಜ್ಜರಣಿ ಗ್ರಾಮದ ರಾಣಿ ಚೆನ್ನಮ್ಮ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬ್ಯಾಂಕ್ಗಳ ಉಳಿತಾಯ ಹಾಗೂ ವಿವಿಧ ಯೋಜನೆಗಳ ಕುರಿತು ಮಾಹಿತಿ ಕಾರ್ಯಕ್ರಮ ಬುಧವಾರ ನಡೆಸಲಾಯಿತು.
ಶಿರಸಿಯ ಅರ್ಥಿಕ ಸಾಕ್ಷರತಾ ಕೇಂದ್ರದ ಮುಖ್ಯಸ್ಥ ಮಹಾಬಲೇಶ್ವರ ಕಾರ್ಯಕ್ರಮವನ್ನು ಉದ್ಘಾಟಿಸಿ, ಬ್ಯಾಂಕ್ ಉಳಿತಾಯ, ಹಣ ರವಾನೆ, ವಿಮಾ ರಕ್ಷೆ, ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ, ಸಾಮಾಜಿಕ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆಯ ಕುರಿತು ಮಾಹಿತಿ ನೀಡಿದರು.
ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲ್ಲೂಕು ಸಮನ್ವಯಾಧಿಕಾರಿ ಮಲ್ಲಿಕಾ ಶೆಟ್ಟಿ ಮಾತನಾಡಿದರು.
ರಾಣಿ ಚೆನ್ನಮ್ಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಶಶಿಕಲಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಮಹಿಳಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.