ಶಿರಸಿ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕರ್ನಾಟಕ ಸರಕಾರ ಬೆಂಗಳೂರು ಇವರಿಂದ ನೀಡಲಾಗುವ 2023ನೇ ಸಾಲಿನ ಬಂಜಾರ ಅಕಾಡೆಮಿಯ ಗೌರವ ಪ್ರಶಸ್ತಿಗೆ ಶಿರಸಿಯ ಹಿರಿಯ ವೈದ್ಯ ಸಾಹಿತಿ ಡಾ.ಕೆ.ಬಿ.ಪವಾರ ಆಯ್ಕೆಯಾಗಿದ್ದಾರೆ.
ಹಿರಿಯ ಸಾಹಿತಿಯಾಗಿ ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಮಾ. 27 ರ ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅಕಾಡೆಮಿಯ ಅಧ್ಯಕ್ಷರಾದ ಡಾ.ಎ.ಆರ್. ಗೋವಿಂದಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.