ಸಿದ್ದಾಪುರ: ತಾಲೂಕಿನ ಬಿಳಗಿಯ ಮಧುವನ ಹಾಗೂ ಜೇನುಗಾರಿಕಾ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ಜೇನು ಸಾಕಾಣಿಕೆ ಮತ್ತು ಜೇನು ಮಿಷನ್ ಯೋಜನೆಯಲ್ಲಿ ವೈಜ್ಞಾನಿಕ ಜೇನು ಬೇಸಾಯ ಪದ್ಧತಿ ಕುರಿತು ಮಾ.25 ಹಾಗೂ 26ರಂದು ಜಿಲ್ಲಾಮಟ್ಟದ ಕಾರ್ಯಾಗಾರ ನಡೆಯಲಿದೆ.
ಕಾರ್ಯಾಗಾರದಲ್ಲಿ ನುರಿತ ಜೇನು ತಜ್ಞರು,ಪ್ರಗತಿಪರ ಜೇನು ಕೃಷಿಕರು ಸಂಪನ್ಮೂಲವ್ಯಕ್ತಿಗಳಾಗಿ ಪಾಲ್ಗೊಂಡು ಜೇನು ಕೃಷಿಯ ಕುರಿತು ಮಾಹಿತಿ ನೀಡಲಿದ್ದಾರೆ. ಆಸಕ್ತ ರೈತರು ಮುಂಚಿತವಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಾ.25,26ಕ್ಕೆ ಜೇನು ಬೇಸಾಯ ಕುರಿತು ಕಾರ್ಯಾಗಾರ
