ಸಿದ್ದಾಪುರ: ಮರಾಠಿಗರಿಂದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಸಿದ್ದಾಪುರದ ನಾಡದೇವಿ ಹೋರಾಟ ವೇದಿಕೆ ವತಿಯಿಂದ ಶನಿವಾರ ಬಂದ್ಗೆ ಬೆಂಬಲ ನೀಡಲಾಯಿತು.
ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರ ಇಂಥವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಂಡು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಮತ್ತು ಜನತೆಧೈರ್ಯದಿಂದ ಹೋರಾಡುವ ವಾತಾವರಣ ನಿರ್ಮಾಣವಾಗಬೇಕು ಎಂದು ನಾಡದೇವಿ ಜನಪರ ವೇದಿಕೆ ಅಧ್ಯಕ್ಷ ಅನಿಲ್ ಕೊಠಾರಿ ಮತ್ತು ಜಿಲ್ಲಾ ರೈತ ಸಂಘದ ಪ್ರಮುಖ ಇಲಿಯಾಸ ಸಾಬ್ ಆಗ್ರಹಿಸಿ ತಹಸೀಲ್ದಾರ ಎಂ. ಆರ್. ಕುಲಕರ್ಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಸಿದ್ದಾಪುರದ ನಾಡದೇವಿ ಹೋರಾಟ ವೇದಿಕೆ ವತಿಯಿಂದ ಸಾಂಕೇತಿಕವಾಗಿ ಮನವಿ ಸಲ್ಲಿಸುವ ಮುಖಾಂತರ ಬಂದ್ಗೆ ಬೆಂಬಲ ನೀಡಿದರು.