Slide
Slide
Slide
previous arrow
next arrow

ಗುಡುಗು- ಸಿಡಿಲಿನ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು

300x250 AD

ಕಾರವಾರ: (KSNDMC), DAMINI APP (Lightning alert) ಹಾಗೂ CAP SACHET App (Rainfall Alert) ವರದಿಗಳನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಆಲಿಕಲ್ಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಸಾರ್ವಜನಿಕರಿಗೆ ಗುಡುಗು ಮತ್ತು ಸಿಡಿಲಿನಿಂದ ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ಜಾನುವಾರು ಪ್ರಾಣಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ. ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು:

300x250 AD
  • ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ.
  • ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯುವುದು.
  • ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯುವುದು.
  • ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರುವುದು.
  • ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.
  • ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.
  • ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.
  • ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.
  • ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳನ್ನು Common Alerting Protocol (CAP)ಮುಖಾಂತರ ಬರುವ ಮೆಸೇಜ್ಗಳನ್ನು ಗಮನಿಸಿಸುವುದು.
  • ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.
  • ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.
  • ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸುವುದು ಸೂಕ್ತವಲ್ಲ.
  • ಕಬ್ಬಿಣದ ಸರಳುಗಳಿಂದ ಕೂಡಿದ ಕೊಡೆ/ಛತ್ರಿಗಳನ್ನು ಬಳಸಬಾರದು.
  • ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿAದ ದೂರವಿರುವುದು.
  • ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.
  • ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.
  • ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.
  • ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.
  • ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು.
  • ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.
  • ಆಟದ ಮೈದಾನ. ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.
  • ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾzಷ್ಟ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.
  • ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ. ವಾಹನದ ಒಳಗೆ ಇರುವುದು.
  • ಅರಣ್ಯ ಪ್ರದೇಶದಿಂದ ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು, ಕೆಲವು ಸಲ ಮಿಂಚಿನ ಹೊಡೆತದಿಂದಾಗಿ ಕಾಡಿಚ್ಯು ಸಂಭವಿಸುವ ಸಾಧ್ಯತೆ ಇರುತ್ತದೆ.
    ಸಾರ್ವಜನಿಕರು ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣವೇ ಜಿಲ್ಲಾಡಳಿತದ ಜಿಲ್ಲಾ ತುರ್ತು ಕಾರ್ಯಾಚರಣಾ ಕೇಂದ್ರದ ಸಂಖ್ಯೆ:Tel:+9108382229857, ವಾಟ್ಯಾಪ್ ಸಂಖ್ಯೆ:Tel:+919483511015 ಗೆ ಸಂಪರ್ಕಿಸಿ ತಮ್ಮ ದೂರುಗಳನ್ನು ದಾಖಲಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top