ದಾಂಡೇಲಿ : ಗ್ಯಾಸ್ ಸಿಲೆಂಡರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಗೂಡ್ಸ್ ವಾಹನವೊಂದು ಬ್ರೇಕ್ ಪೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು, ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ, ಚಾಲಕನಿಗೆ ಗಾಯವಾದ ಘಟನೆ ಮಂಗಳವಾರ ಬೆಳಿಗ್ಗೆ ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು – ಕರ್ಕಾ ಮಧ್ಯೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ವಿನಾಯಕ ಚ್ಯಾಟಿ ಎಂಬಾತನೇ ಗಾಯಗೊಂಡ ಚಾಲಕನಾಗಿದ್ದಾನೆ. ಅಪಘಾತದಲ್ಲಿ ಈತ ವಾಹನದೊಳಗಡೆ ಸಿಲುಕಿಕೊಂಡಿದ್ದು, ಸ್ಥಳೀಯರು ವಾಹನದ ಬಾಗಿಲು ಮುರಿದು ಈತನನ್ನು ವಾಹನದಿಂದ ಕೆಳಗಿಳಿಸಿದ್ದಾರೆ. ತಕ್ಷಣವೇ ಈತನನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ 108 ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆಯನ್ನು ನೀಡಲಾಗುತ್ತಿದೆ.