ದಾಂಡೇಲಿ : ಜೋರಾದ ಗಾಳಿ ಮಳೆಗೆ ಮರವೊಂದು ಧರೆಗುರುಳಿ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಗರದ ಕೇಂದ್ರ ಅಂಚೆ ಕಚೇರಿಯ ಹತ್ತಿರ ಮಂಗಳವಾರ ನಡೆದಿದೆ.
ಮಂಗಳವಾರ ಮಧ್ಯಾಹ್ನ ಸುಮಾರು ಒಂದು ಗಂಟೆಗಳ ಕಾಲ ನಗರದಲ್ಲಿ ಗಾಳಿ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಕೇಂದ್ರ ಅಂಚೆ ಕಚೇರಿ ಹತ್ತಿರ ಮರವೊಂದು ಉರುಳಿ ಬಿದ್ದ ಪರಿಣಾಮವಾಗಿ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಇದರಿಂದಾಗಿ ಕೆಲ ಹೊತ್ತು ವಿದ್ಯುತ್ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ ನಾಯಕ, ಶಾಖಾಧಿಕಾರಿ ಉದಯ ಹಾಗೂ ಹೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.