ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಅಗ್ನಿಬನ್ನಿರಾಯ ಜಯಂತಿಯನ್ನು ಮಾ. 28 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ. ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್. ವಿ.ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ.ಉಳ್ವೇಕರ ಹಾಗೂ ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಮಾ.28ಕ್ಕೆ ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮ
