Slide
Slide
Slide
previous arrow
next arrow

ಗೃಹ ಸಚಿವರಿಂದ ಪೊಲೀಸ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

300x250 AD

ಕಾರವಾರ: ಜಿಲ್ಲೆಯ ವಿಧಾನಸಭಾ/ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ರೂ.3 ಕೋಟಿ ವೆಚ್ಚದಲ್ಲಿ ಖರೀದಿಸಿದ 20 ಹೊಸ ವಾಹನಗಳನ್ನು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಪೊಲೀಸ್ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು ರೂ.1.15 ಕೋಟಿ ವೆಚ್ಚದಲ್ಲಿ ನವೀಕರಿಸಲಾಗಿದ್ದು, ಜಿಲ್ಲಾ ಪೊಲೀಸ್ ತಾಂತ್ರಿಕ ತರಬೇತಿ ಕೇಂದ್ರ, ಸೈಬರ್ ಮತ್ತು ಆರ್ಥಿಕ ಅಪರಾಧಗಳು, ಮಾದಕ ದ್ರವ್ಯ ನಿಯಂತ್ರಣ ಪೊಲೀಸ್ ಠಾಣೆ. ಸಿ.ಡಿ.ಆರ್ ವಿಭಾಗ, ತ್ರಿನೇತ್ರ ಸಾಮಾಜಿಕ ಜಾಲತಾಣ ನಿಗಾ ಕೇಂದ್ರ, ವಿಡಿಯೋ ಕಾನ್ಫರೆನ್ಸ್ ಸಭಾಂಗಣ, ಗಣಕಯಂತ್ರ ತರಬೇತಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕೊಠಡಿ ಸೇರಿದಂತೆ ವಿವಿಧ ವಿಭಾಗಗಳ ಉದ್ಘಾಟಿಸಿದರು.
ನಂತರ ಶಿರಸಿ ಪಟ್ಟಣದ ಟ್ರಾಫಿಕ್ ಪೊಲೀಸ್ ಠಾಣೆಯ ವಿದ್ಯುಕ್ತ ಚಾಲನೆ (Through WEBCAST), ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಘಟಕದಿಂದ ಚಿತ್ರಿಸಲಾಗಿರುವ ವಿಡಿಯೋಗಳ ಬಿಡುಗಡೆ ಮಾಡಿದರು.
ಈ ಸಂಧರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ. ಸೈಲ್, ಶಾಸಕರಾದ ಅರಬೈಲ್ ಶಿವರಾಮ ಹೆಬ್ಬಾರ್, ಭೀಮಣ್ಣ ಟಿ. ನಾಯ್ಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top