ಸಿದ್ದಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿ ಹಾಗೂ ಸಂವಿಧಾನ ಬದಲಾವಣೆ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿಕೆ ಖಂಡಿಸಿ ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ತಾಲೂಕು ಬಿಜೆಪಿ ಘಟಕ ಪ್ರತಿಭಟನೆ ನಡೆಸಿ ನಂತರ ಡಿಕೆ ಶಿವಕುಮಾರ ಅವರ ಭಾವಚಿತ್ರವಿರುವ ಪ್ರತಿಕೃತಿಗೆ ಬೆಂಕಿ ಹಚ್ಚಿ ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂವಿಧಾನದ ವಿರೋಧಿ ನಿಲುವನ್ನು ಖಂಡಿಸಿ ಡಿ.ಕೆ.ಶಿವಕುಮಾರ ಅವರ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮರಣ ಶಾಸನವಾಗಿ ಪರಿಣಮಿಸಲಿದೆ. ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪದೇಪದೆ ಅವಮಾನ ಮಾಡುತ್ತಿದೆ ಎಂದು ಹೇಳಿದರು.
ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ., ಪ್ರಮುಖರಾದ ಗುರುರಾಜ ಶಾನಭಾಗ, ಎಸ್.ಕೆ.ಮೇಸ್ತಾ, ತೋಟಪ್ಪ ನಾಯ್ಕ, ವಿನಯ ಹೊನ್ನೆಗುಂಡಿ, ರವಿಕುಮಾರ ನಾಯ್ಕ, ನಂದನ ಬೋರ್ಕರ್, ವಿನಾಯಕ ಕೆ.ಆರ್, ಮಂಜುನಾಥ ಭಟ್ಟ, ಶ್ರೀಕಾಂತ ಭಟ್ಟ ಕೊಳಗಿ, ವಿಜಯನಾರಾಯಣ ಹೆಗಡೆ, ಸುರೇಶ ನಾಯ್ಕ ಬಾಲಿಕೊಪ್ಪ. ಎ.ಜಿ.ನಾಯ್ಕ, ಕೃಷ್ಣಮೂರ್ತಿ ನಾಯ್ಕ, ವೆಂಕೋಬಾ, ಗಣೇಶ ನಾಯ್ಕ, ಸುರೇಶ ನಾಯ್ಕ ಇತರರಿದ್ದರು.