ಶಿರಸಿ: ತಾಲೂಕಿನ ಕೊಡ್ನಗದ್ದೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ಹೆಗಡೆ ಅವಿರೋಧವಾಗಿ ಗುರುವಾರ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ತೆರವಾದ ಹಿನ್ನೆಲೆ ಗುರುವಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ಸದಸ್ಯ ಪ್ರವೀಣ ಹೆಗಡೆ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಅಧ್ಯಕ್ಷರಾಗಿ ಪ್ರವೀಣ ಹೆಗಡೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಶಿರಸಿ ಪ್ರಭಾರ ತಹಸೀಲ್ದಾರ ಶೈಲೇಶ ಪರಮಾನಂದ ಕಾರ್ಯನಿರ್ವಹಿಸಿದರು. ಈ ವೇಳೆ ಎಲ್ಲ ಸದಸ್ಯರು ಹಾಗೂ ಪಿಡಿಓ ಇದ್ದರು.