ದಾಂಡೇಲಿ : ಗಾಂಧಿನಗರ ಶ್ರೀಆದಿಶಕ್ತಿ ದುರ್ಗಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜಾರಾಧನೆಗಳೊಂದಿಗೆ ಜಾತ್ರಾ ಮಹೋತ್ಸವ ಜರುಗಿತು.
ವೇದಮೂರ್ತಿ ಅಜ್ಜಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಶ್ರೀ ಆದಿಶಕ್ತಿ ದುರ್ಗಾದೇವಿಯ ಪೂಜಾ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಿತು. ಬೆಳಗಿನಿಂದಲೆ ವಿಶೇಷ ಪೂಜಾ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆಯಾದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯು ಜರುಗಿತು.
ಜಾತ್ರೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಶ್ರೀ.ಆದಿಶಕ್ತಿ ದುರ್ಗಾದೇವಿ ದೇವಸ್ಥಾನ ಅಭಿವೃದ್ಧಿ ಕಮಿಟಿಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಭಕ್ತಾಭಿಮಾನಿಗಳು ಜಾತ್ರೋತ್ಸವದ ಯಶಸ್ವಿಗಾಗಿ ಶ್ರಮಿಸಿದ್ದರು.