ಶಿರಸಿ: ನವೆಂಬರ್-2024 ನೇ ಮಾಹೆಯ ರೂ.5 ಪ್ರೋತ್ಸಾಹಧನ ಮಾ.30, ಯುಗಾದಿಯ ದಿನವಾದ ಭಾನುವಾರದಂದು ಹಾಲು ಉತ್ಪಾದಕರ ಖಾತೆಗೆ ಜಮಾ ಆಗಿದೆ ಎಂದು ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉಪಾಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ತಿಳಿಸಿದರು.
ಈ ಸಂದರ್ಭದಲ್ಲಿ ಹೇಳಿಕೆ ನೀಡಿದ ಅವರು ಕೆಲ ದಿನಗಳ ಹಿಂದೆಯಷ್ಟೇ ಜೂನ್, ಜುಲೈ, ಆಗಸ್ಟ್, ಸಪ್ಟೆಂಬರ್ ಹಾಗೂ ಅಕ್ಟೋಬರ್ ಮಾಹೆಗಳ ರೂ.5 ಪ್ರೋತ್ಸಾಹಧನ ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಜಮಾ ಆಗಿರುವ ಬಗ್ಗೆ ಹಾಲು ಉತ್ಪಾದಕರಿಗೆ ಮಾಹಿತಿ ನೀಡಲಾಗಿರುತ್ತದೆ. ಇನ್ನುಳಿದಂತೆ 2024-2025 ನೇ ಸಾಲಿನಲ್ಲಿ ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ಮಾಹೆಗಳ ರೂ. 5 ಪ್ರೋತ್ಸಾಹಧನ ಸರ್ಕಾರದಿಂದ ಹಾಲು ಉತ್ಪಾದಕ ರೈತರ ಖಾತೆಗೆ ಸರ್ಕಾರದಿಂದ ಜಮಾ ಆಗಬೇಕಾಗಿದ್ದು, ಬಾಕಿ ಇರುವ ಮಾಹೆಗಳ ರೂ.5 ಪ್ರೋತ್ಸಾಹಧನ ಕೂಡ ಶ್ರೀಘ್ರವೇ ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕ ರೈತರ ಖಾತೆಗೆ ಜಮಾ ಆಗುವ ನೀರಿಕ್ಷೆಯಿದೆ ಎಂದು ಮಾಹಿತಿ ನೀಡಿದರು. ನವೆಂಬರ್-2024 ನೇ ಮಾಹೆಯ ರೂ.5 ಪ್ರೋತ್ಸಾಹಧನ ಜಮಾ ಆಗದ ಹಾಲು ಉತ್ಪಾದಕ ರೈತರು ಕೂಡಲೇ ಆಯಾ ವ್ಯಾಪ್ತಿಯ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಿದರು.