Slide
Slide
Slide
previous arrow
next arrow

ಡಾ.ಬಾಬು ಜಗಜೀವನ ರಾಮ್, ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

300x250 AD

ಕಾರವಾರ: ಜಿಲ್ಲೆಯಲ್ಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಮ್ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏಪ್ರಿಲ್ 14 ರಂದು ನಡೆಯುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಲಾರ್ಪಣೆ, ಪುಷ್ಪ ನಮನ ಮತ್ತು ಪೂಜೆ ಸಲ್ಲಿಸಿ, ಭಾವಚಿತ್ರಗಳನ್ನು ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಿಜೃಂಭಣೆಯ ಮೆರವಣಿಗೆ ಆಯೋಜಿಸುವಂತೆ ತಿಳಿಸಿದರು.

ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕುಡಿಯುವ ನೀರು ಮತ್ತು ಮಜ್ಜಿಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಕಲಾತಂಡಗಳನ್ನು ಪ್ರಾಯೋಜಿಸುವಂತೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಮಹಿಳೆಯರಿಂದ ಕುಂಭಮೇಳದ ಮೆರವಣಿಗೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

300x250 AD

ಡಾ.ಬಾಬು ಜಗಜೀವನ ರಾಮ್ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿಷಯ ತಜ್ಞರಿಂದ ವಿಶೇಷ ಉಪನ್ಯಾಸ ಆಯೋಜಿಸಬೇಕು, ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪ.ಜಾತಿ ಮತ್ತು ಪ.ಪಂಗಡದ ಪ್ರತಿಭಾನ್ವಿತರಿಗೆ , ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.

ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಿರಬೇಕು, ಪೊಲೀಸ್ ಇಲಾಖೆವತಿಯಿಂದ ಮೆರವಣಿಗಗೆ ಸೂಕ್ತ ಪೊಲೀಸ್ ಭದ್ರತೆ ಮತ್ತು ಪೊಲೀಸ್ ಬ್ಯಾಂಡ್ ಒದಗಿಸಬೇಕು ಎಂದರು.

 ಸಭೆಯಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಸಮುದಾಯದ ಮುಖಂಡರಾದ ದೀಪಕ್ ಕುಡಾಲಕರ್, ಹನುಮಂತ ತಳವಾರ್, ಮಾಲ ಪ್ರದೀಪ್ ಹುಲಸ್ವಾರ, ಶ್ಯಾಮ್ ಸುಂದರ್ ಗೋಕರ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Share This
300x250 AD
300x250 AD
300x250 AD
Back to top