ಸಿದ್ದಾಪುರ : ತಾಲೂಕಿನ ಪ್ರಸಿದ್ಧ ಬೇಡ್ಕಣಿ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವವು ಏ.5ರ ಶನಿವಾರದಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಾಲಯದ ಆಡಳಿತ ಕಮಿಟಿ ಅಧ್ಯಕ್ಷ ನಾಗರಾಜ ನಾಯ್ಕ್ ಬೇಡ್ಕಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾತ್ರೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಏಪ್ರಿಲ್ 3 ರಿಂದ ಶನಿ ದೇವರ ಕಲಶ ಸ್ಥಾಪನೆ, ತೀರ್ಥ ಪ್ರಸಾದ ವಿತರಣೆ, ಶುಕ್ರವಾರ ಗಣಹೋಮ, ಕಲಾವೃದ್ಧಿ ಹೋಮ, ಮೃತ್ಯುಂಜಯ ಹೋಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.
ಶನಿವಾರದಂದು ಬೆಳಿಗ್ಗೆ ಪಲ್ಲಕ್ಕಿ ಉತ್ಸವ, ಹಣ್ಣು ಕಾಯಿ ಸೇವೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಹಾಗೂ ಸಂಜೆ
ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಶ್ರೀ ಶನೇಶ್ವರ ಮಹಾತ್ಮೆ ಮೂಡಲಪಾಯ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು ಮನ ಧನ ಸಹಕಾರ ನೀಡಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಆಡಳಿತ ಕಮಿಟಿ ಅಧ್ಯಕ್ಷ ನಾಗರಾಜ ನಾಯ್ಕ್, ಉಪಾಧ್ಯಕ್ಷ ಜಿ.ಎಂ ನಾಯ್ಕ್, ಕಾರ್ಯದರ್ಶಿ ಟಿ.ಕೆ ಮಡಿವಾಳ ರವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.